ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಪಕ್ಷದ ತೀರ್ಮಾನವೇ ಅಂತಿಮ- ಸಚಿವ ರಮೇಶ ಜಾರಕಿಹೊಳಿ
ನನ್ನ ಪುತ್ರ ಅಮರನಾಥ ಚುನಾವಣೆಗೆ ಸ್ಪರ್ಧಿಸುವ ಕುರಿತು ಚರ್ಚೆಯಾಗಿಲ್ಲ
ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಪಕ್ಷದ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಜಲಸಂಪನ್ಮೂಲ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಿಗೆ ಟಿಕೆಟ್ ನೀಡಬೇಕು ಎನ್ನುವುದು ಅಂತಿಮವಾಗಿ ಪಕ್ಷದ ವರಿಷ್ಠರಿಗೆ ಬಿಟ್ಟ ವಿಚಾರವಾಗಿದೆ. ನನ್ನ ಹಿರಿಯ ಪುತ್ರ ಸಂತೋಷ ಲೋಕಸಭಾ ಉಪಚುನಾವಣೆಗೆ ಸ್ಪರ್ಧಿಸುತ್ತಾನೆ ಎಂಬುದು ನಿಜವಲ್ಲ. ಅಮರನಾಥ ಮಾತ್ರ ಸಕ್ರಿಯ ರಾಜಕೀಯದಲ್ಲಿದ್ದಾನೆ ಎಂದು ಹೇಳಿದರು.
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ನಾಲ್ಕೈದು ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದ್ದು, ನದಿ ಹಳ್ಳಗಳು ಉಕ್ಕಿ ಹರಿಯುತ್ತಿವೆ. ಆದರೆ, ಜಿಲ್ಲೆಯಲ್ಲಿ ಎಲ್ಲಿಯೂ ಪ್ರವಾಹ ಪರಿಸ್ಥಿತಿ ಎದುರಾಗಿಲ್ಲ. ನದಿ ತೀರದ ಜನರು ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡಿದರು.