ಬೆಳಗಾವಿ: ನಾಳೆ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ. ಸಂಪುಟ ವಿಸ್ತರಣೆ ವಿಚಾರ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟದ್ದು ಎಂದು ಸಕ್ಕರೆ ಸಚಿವ ಶಿವರಾಂ ಹೆಬ್ಬಾರ ಹೇಳಿದರು.
ಬೆಳಗಾವಿಯಲ್ಲಿ ಸೋಮವಾರ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ಯಡಿಯೂರಪ್ಪ ಕೊಟ್ಟ ಮಾತು ನಡೆಸಿದ್ದು ಎಲ್ಲರಿಗೂ ಗೊತ್ತಿದೆ. ವರಿಷ್ಠರು ಮತ್ತು ಸಿಎಂ ಚರ್ಚೆ ಮಾಡಿ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ .ಯಾವುದೇ ಪಕ್ಷದ ಸರ್ಕಾರ ಇರಲಿ, ಯಾರೇ ಸಿಎಂ ಇರಲಿ ಸಂಪುಟ ವಿಸ್ತರಣೆ ಮಾಡೋವಾಗ ಬಹಳ ಜನರಿಗೆ ಆಪೇಕ್ಷೆ ಇರುತ್ತದೆ. ಆದರೆ ಶೇಕಡ ೧೦ಕ್ಕಿಂತ ಹೆಚ್ಚು ಸಚಿವ ಸ್ಥಾನ ನೀಡಲು ಕಾನೂನಿನಲ್ಲಿ ಅವಕಾಶ ಇಲ್ಲ. ಈ ರಾಜ್ಯಕ್ಕೆ ೩೫ ಶಾಸಕರನ್ನು ಮಾತ್ರ ಸಚಿವರನ್ನಾಗಿ ಮಾಡಬೇಕಾಗುತ್ತದೆ. ಎಲ್ಲರಿಗೂ ಸಚಿವರಾಗಬೇಕೆಂಬ ಆಸೆ ಇರುತ್ತದೆ. ಎಲ್ಲವನ್ನೂ ನಿಭಾಯಿಸುವ ಶಕ್ತಿ ಸಿಎಂ ಬಿಎಸ್ವೈ ಬಳಿ ಇದೆ ಎಂದರು.
ನಾಯಕತ್ವ ಬದಲಾವಣೆ ಸತ್ಯಕ್ಕೆ ದೂರವಾದ ವಿಚಾರ.ಸಿಎಂ ಬದಲಾವಣೆ ಇಲ್ಲ ಅಂತಾ ಬಿಜೆಪಿ ರಾಜ್ಯಾಧ್ಯಕ್ಷರೇ ಸ್ಪಷ್ಟಪಡಿಸಿದ್ದಾರೆ. ಸಿಎಂ ಬದಲಾವಣೆ ಬಗ್ಗೆ ನಮಗಿಂತ ಮಾಧ್ಯಮದವರಿಗೆ ಹೆಚ್ಚು ಆಸಕ್ತಿ ಇದೆ. ಡಿಕೆಶಿಗೆ ಏನಾದರೂ ಕನಸು ಬಿದ್ದಿದ್ರೆ ಅವನನ್ನೇ ಕೇಳಿ ಎಂದ ಅವರು ಯಾರಿಗೆ ಯಾವ ಖಾತೆ ನೀಡಬೇಕು, ಬದಲಾವಣೆ ಮಾಡಬೇಕು ಅಂತಾ ಸಿಎಂಗೆ ಬಿಟ್ಟ ವಿಚಾರ. ನಾನು ಸಮಾಧಾನವಾಗಿದ್ದೇನೆ, ಕೊಟ್ಟ ಖಾತೆ ಸಮರ್ಥವಾಗಿ ನಿಭಾಯಿಸುತ್ತಿದ್ದೇನೆ