ಜನಸೇವಕ ಸಮಾವೇಶದಲ್ಲಿ ಕೋವಿಡ್ ನಿಯಮ ಪಾಲನೆ

ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿಕೆ

0 110

ಬೆಳಗಾವಿ: ಬಿಜೆಪಿ ಜನಸೇವಕ ಸಮಾವೇಶದಲ್ಲಿ ೩ ಲಕ್ಷ ಜನರು ಪಾಲ್ಗೊಳ್ಳಲಿದ್ದು, ಕೋವಿಡ್ ಮಾರ್ಚಸೂಚಿಗಳನ್ನು ಪಾಲನೆ ಮಾಡಲಾಗುವುದು, ಸಾಮಾಜಿಕ ಅಂತರ, ಸ್ಯಾನಿಟೈಸರ್, ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಜ. ೧೭ ರಂದು ನಡೆಯಲಿರುವ ಬಿಜೆಪಿ ಜನಸೇವಕ ಸಮಾವೇಶದ ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜೊತೆಗೆ ಮಾತನಾಡಿದ ಅವರು, ಆರೋಗ್ಯ ಇಲಾಖೆ ಮತ್ತು ರಾಜ್ಯ ಸರ್ಕಾರದ ಮಾರ್ಗಸೂಚಿ ಅನುಸಾರ ಕಾರ್ಯಕ್ರಮ ಮಾಡಲಾಗುವುದು ಎಂದರು.
ಇನ್ನು ಮೂಡಲಗಿಯ ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಅವರು, ಬಿಜೆಪಿ ಜನಸೇವಕ ಸಮಾವೇಶಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಕೋವಿಡ್ ವೈರಸ್‌ನಂತಹ ಇಂತಹ ಸಂದರ್ಭದಲ್ಲಿ ಇಂತಹ ಸಮಾವೇಶ ಮಾಡುವುದು ಎಷ್ಟು ಸೂಕ್ತವೇ ಎಂದು ಪ್ರಶ್ನಿಸಿದ್ದಾರೆ. ಕೋವಿಡ್ ಮಾರ್ಗಸೂಚಿಗಳನ್ನೊಳಗೊಂಡ ಆದೇಶವನ್ನಾದರೂ ಹಿಂಪಡೆಯಬೇಕು. ಇಲ್ಲದಿದ್ದರೆ ಬಿಜೆಪಿ ಜನಸೇವಕ ಸಮಾವೇಶ ರದ್ದುಗೊಳಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಜನಸೇವಕ ಸಮಾವೇಶದ ಕ್ರಮ ಪ್ರಶ್ನಿಸಿ ಹೈಕೋರ್ಟನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗುವುದು ಎಂದು ಅವರ ಹೇಳಿದ್ದಾರೆ.

Leave A Reply

Your email address will not be published.