ಜನಸೇವಕ ಸಮಾವೇಶಕ್ಕೆ ಸಜ್ಜು: ಕೇಸರಿಮಯವಾದ ಬೆಳಗಾವಿ

0 125

ಬೆಳಗಾವಿ: ಇಲ್ಲಿನ ಜಿಲ್ಲಾ ಕ್ರೀಂಡಾಗಣದಲ್ಲಿ ಬಿಜೆಪಿ ಜನಸೇವಕ ಸಮಾವೇಶ ಸಮಾರಂಭಕ್ಕೆ ವೇದಿಕೆ ಸಜ್ಜುಗೊಂಡಿದ್ದು, ನಗರದ ಪ್ರಮುಖ ರಸ್ತೆಗಳು, ಪ್ರಮುಖ ವೃತ್ತಗಳಲ್ಲಿ ಬಿಜೆಪಿ ನಾಯಕರ ಬ್ಯಾನರ್, ಕಟೌಟ್, ಬಾವುಟ ಹಾರಾಜಿಸುತ್ತಿವೆ. ಬೆಳಗಾವಿಯ ಕೇಸರಿಮಯಗೊಂಡಿದೆ.
ಕೇಂದ್ರ ಗೃಹ ಸಚಿವ ಅಮಿತ ಶಾ ಜನಸೇವಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ನಗರದ ಪ್ರಮುಖ ರಸ್ತೆಗಳ ಚಿತ್ರಣವೇ ಬದಲಾಗಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸೇರಿದಂತೆ ಸಂಪುಟ ಸಚಿವರು, ಶಾಸಕರು ಹಾಗೂ ಪಕ್ಷದ ನಾಯಕರು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಲಕ್ಷಾಂತರ ಕಾರ್ಯಕರ್ತರು ಈ ಸಮಾವೇಶಕ್ಕೆ ಸಾಕ್ಷಿಯಾಗಲಿದ್ದಾರೆ.
ಕೋವಿಡ್ ಮಾರ್ಗಸೂಚಿಗಳನ್ನು ಗಾಳಿಗೆ ತೂರಿ ಇದೇ ಮೊದಲ ಬಾರಿಗೆ ಬಿಜೆಪಿ ಬೆಳಗಾವಿಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದೆ. ಪ್ರತಿಪಕ್ಷ ಕಾಂಗ್ರೆಸ್ ಮತ್ತು ಸಮಾಜ ಸೇವಕರ ಆಕ್ರೋಶಕ್ಕೆ ಕಾರಣವಾಗಿದೆ. ಕೋವಿಡ್ ಮಾರ್ಗಸೂಚಿ ಆದೇಶ ಹಿಂಪಡೆಯಬೇಕು. ಇಲ್ಲದಿದ್ದರೆ ಬಿಜೆಪಿ ಜನಸೇವಕ ಸಮಾವೇಶ ರದ್ದುಗೊಳಿಸುವಂತೆ ಆಗ್ರಹಿಸಿದ್ದಾರೆ.
ಬಿಜೆಪಿ ರಾಜ್ಯ ವಕ್ತಾರ ಕ್ಯಾ.ಗಣೇಶ ಕಾರ್ಣಿಕ ಅವರು ಕೋವಿಡ್ ಹಿನ್ನೆಲೆಯಲ್ಲಿ ಅಧಿಕಾರಿಗಳ ಸಹಕಾರದಿಂದಲೇ ನಾವು ಜನಸೇವಕ ಸಮಾವೇಶ ಹಮ್ಮಿಕೊಂಡಿದ್ದೇವೆ. ಕೋವಿಡ್ ನಿಯಮ ಪಾಲನೆ ಮಾಡುತ್ತೇವೆ ಎಂದರು. ಜಿಲ್ಲಾಡಳಿತದಿಂದ ಈ ಸಮಾವೇಶಕ್ಕೆ ಅನುಮತಿ ಸಿಕ್ಕಿದೇಯೆ ಎಂಬ ಪ್ರಶ್ನೆಗೆ ಉತ್ತರ ನೀಡಲು ನಿರಾಕರಿಸಿದ ಕಾರ್ಣಿಕ ಅಧಿಕಾರಿಗಳ ಸಹಕಾರ ನೀಡಿದ್ದಾರೆ ಎಂದರು.
ಜನಸೇವಕ ಸಮಾವೇಶದ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆಯನ್ನು ಮಾಡಲಾಗಿದ್ದು, ನಗರದ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಪೊಲೀಸ್ ಆಯುಕ್ತ ತ್ಯಾಗರಾಜನ್ ತಿಳಿಸಿದ್ದಾರೆ.

Leave A Reply

Your email address will not be published.