ಡ್ರಗ್ ದಂಧೆ: ಆದಿತ್ಯ ಆಳ್ವ ಮನೆ ಮೇಲೆ ಸಿಸಿಬಿ ಪೊಲೀಸರಿಂದ ದಾಳಿ

0 142

ಬೆಂಗಳೂರು: ಚಂದನವನ ಡ್ರಗ್ ದಂಧೆ ಪ್ರಕರಣದ ಆರನೇ ಆರೋಪಿ ಮಾಜಿ ಸಚಿವ ಜೀವರಾಜ್ ಆಳ್ವ ಅವರ ಪುತ್ರ ಆದಿತ್ಯ ಆಳ್ವ ಮನೆಯ ಮೇಲೆ ಮಂಗಳವಾರ ಬೆಳಂಬೆಳಗ್ಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ಸರ್ಚ ವಾರೆಂಟ್ ಪಡೆದು ಹೆಬ್ಬಾಳಕರ ಹತ್ತಿರವಿರುವ ಆದಿತ್ಯ ಅವರ ಹೌಸ್ ಆಫ್ ಲೈಫ್ ಮನೆ ಮೇಲೆ ದಾಳಿ ನಡೆಸಲಾಗಿದೆ. ಸಿಸಿಬಿ ಅಧಿಕಾರಿಗಳು ಅಗತ್ಯ ದಾಖಲೆಗಳನ್ನು ಕಲೆ ಹಾಕಿದ್ದು, ಪರಿಶೀಲನಾ ಕಾರ್ಯ ಮುಂದುವರೆದಿದೆ. ಮನೆಯ ಶೋಧ ಕಾರ್ಯ ಮುಂದುವರೆದಿದೆ. ಸುಮಾರು ೪ ಎಕರೆ ವಿಸ್ತೀರ್ಣದಲ್ಲಿರುವ ಈ ವಿಶಾಲವಾದ ಜಾಗೆಯಲ್ಲಿ ರೆಸಾರ್ಟ ಕೂಡ ಇದೆ. ಇಲ್ಲಿ ಹಲವಾರು ಪಾರ್ಟಿಗಳನ್ನು ಆಯೋಜಿಸಲಾಗಿದೆ ಎನ್ನಲಾಗಿದೆ.
ಡ್ರಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾದಕ ತಾರೆ ರಾಗಿಣಿಯನ್ನು ಪೊಲೀಸರು ಬಂಧಿಸಿರುವ ಹಿನ್ನೆಲೆಯಲ್ಲಿ ಆದಿತ್ವ ಆಳ್ವ ತಲೆಮರೆಸಿಕೊಂಡಿದ್ದು, ಆತನ ಪತ್ತೆ ಕಾರ್ಯವನ್ನು ಪೊಲೀಸರು ಮುಂದುವರೆಸಿದ್ದಾರೆ. ಈ ಮಧ್ಯೆ ಆತನ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.

Leave A Reply

Your email address will not be published.