ಅ. 2 ರಿಂದ ಘಟಪ್ರಭಾದಲ್ಲಿ ಕಾಂಗ್ರೆಸ್ ಸೇವಾದಳ ತರಬೇತಿ- ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

0 69

ಬೆಳಗಾವಿ: ಘಟಪ್ರಭಾದಲ್ಲಿ ಕಾಂಗ್ರೆಸ್ ಸೇವಾದಳ ತರಬೇತಿ ಕೇಂದ್ರ ಅ. 2 ರಿಂದ ಕಾರ್ಯಾರಂಭ ಮಾಡಲಿದ್ದು,ಹೆಚ್ಚಿನ ಸಂಖ್ಯೆಯಲ್ಲಿ  ಕಾರ್ಯಕರ್ತರು ಸಂಖ್ಯೆಯಲ್ಲಿ ತರಬೇತಿ ಪಡೆದುಕೊಂಡು ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.
ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ನಡೆದ ಕಾಂಗ್ರೆಸ್  ಸೇವಾದಳ ಸದಸ್ಯತ್ವ ಅಭಿಯಾನ, ಹಾಗೂ ಪದಾಧಿಕಾರಿಗಳಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದ ಅವರು  ರಾಷ್ಟ್ರಮಟ್ಟದ ಸೇವಾದಳ ತರಬೇತಿ ಕೇಂದ್ರ ಆರಂಭಿಸಬೇಕು ಎಂಬ ಬಹುದಿನದ ಕನಸು ನನಸಾಗಿದೆ. ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ತರಬೇತಿ ಪಡೆದುಕೊಳ್ಳಬೇಕು. ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ತಮ್ಮ ಪ್ರದೇಶದ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆಗೆ ಮಹತ್ವ ನೀಡಬೇಕು ಎಂದು ಹೇಳಿದರು.
ಪ್ರಮುಖವಾಗಿ  ಮಹಾತ್ಮಾ ಗಾಂಧಿಜಿ ಅವರ ವಿಚಾರಗಳನ್ನು ಮತ್ತು ಮಾಜಿ ಪ್ರಧಾನಿ ದಿ. ಜವಾಹರಲಾಲ್ ನೆಹರು ಅವರ ಸಾಧನೆಗಳು ಸೇರಿ ಕಾಂಗ್ರೆಸ್ ಪಕ್ಷದ ಹೋರಾಟ ಮತ್ತು ಇತಿಹಾಸದ ಬಗ್ಗೆ ಕಾರ್ಯಕರ್ತರಲ್ಲಿ ಅರಿವು ಮೂಡಿಸಲಾಗುವುದು. ಇದರ ಜೊತೆಗೆ ಸ್ವಾತಂತ್ರ್ಯದ ನಂತರ  ದೇಶಕ್ಕೆ ಕಾಂಗ್ರೆಸ್ ನೀಡಿದ ಕೊಡುಗೆ ಬಗ್ಗೆ ಕಾರ್ಯಕರ್ತರಿಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ  ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ, ಕಲ್ಪನಾ ಜೋಶಿ,  ಮಾಜಿ ನಗರ ಸಭೆ ಸದಸ್ಯೆ ಜಯಶ್ರೀ ಮಾಳಗಿ, ಅನ್ನಪೂರ್ಣಾ ಅನಸೂರಕರ್  ಮುಂತಾದವರು ಇದ್ದರು.  ಕಲ್ಪನಾ ಜೋಶಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು.
ಸತೀಶ ಜಾರಕಿಹೊಳಿ ಪುತ್ರ ರಾಹುಲ್, ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave A Reply

Your email address will not be published.