ಬೆಳಗಾವಿ: ಬೆಳಗಾವಿ ನಗರದಲ್ಲಿ ಮಟ್ಕಾ ದಂಧೆ ವಿರುದ್ಧ ಸಮರ ಸಾರಿರುವ ಪೊಲೀಸರು ಮಂಗಳವಾರ ರಾತ್ರಿ ಮಟ್ಕಾ ಕಿಂಗ್ಪಿನ್, ಬುಕ್ಕಿ ಸೇರಿದಂತೆ ೨೩ ಜನ ಆರೋಪಿಗಳನ್ನು ಬಂಧಿಸಿದ್ದಾರೆ. ಅವರಿಂದ ೨.೧೧ ಲಕ್ಷ ನಗದು ಹಣ, ೧೫ ಮೊಬೈಲ್ ಮತ್ತು ಮಟ್ಕಾ ಚೀಟಿಗಳನ್ನು ವಶಪಡಿಸಿಕೊಂಡಿದ್ದಾರೆ.
ಖಂಜರ ಗಲ್ಲಿಯ ಮಹಮ್ಮದಶಪಿ ತಹಸೀಲ್ದಾರ ಮತ್ತು ಆತನ ಸಹಚರರನ್ನು ಬಂಧಿಸಲಾಗಿದೆ. ಆರೋಪಿಗಳು ಕಲ್ಯಾಣ ಮಟ್ಕಾ ಓಸಿ ಅಂಕಿ ಸಂಖ್ಯೆಗಳ ಮೇಲೆ ಸಾರ್ವಜನಿಕರಿಂದ ಹಣ ಹಚ್ಚಿಕೊಂಡುಜೂಜಾಟದಲ್ಲಿ ತೊಡಗಿದ್ದರು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಡಿಸಿಪಿ ಡಾ.ವಿಕ್ರಮ ಅಮಟೆ ನೇತೃತ್ವದಲ್ಲಿ ಮಾರ್ಕೆಟ್ ಪೊಲೀಸ್ ಠಾಣೆ ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.