ದೆಹಲಿಯಲ್ಲಿ ಸಚಿವ ಸುರೇಶ ಅಂಗಡಿ ಅಂತ್ಯಕ್ರಿಯೆ

0 152

ಹೊಸದೆಹಲಿ: ಕೊರೋನಾ ಸೋಂಕಿಗೆ ತುತ್ತಾಗಿ ದೆಹಲಿ ಏಮ್ಸ್ ಆಸ್ರತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದ ಬೆಳಗಾವಿ ಸಂಸದ, ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಅವರ ಅಂತ್ಯಕ್ರಿಯೆ ಗುರುವಾರ ಸಂಜೆ ಹೊಸದೆಹಲಿಯ ದ್ವಾರಕಾದ ಸೆಕ್ಟರ್ ೨೪ರ ಲಿಂಗಾಯತ ರುದ್ರಭೂಮಿಯಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ನೆರವೇರಿತು.
ಪತ್ನಿ ಮಂಗಳಾ, ಪುತ್ರಿಯರು, ಸಂಬಂಧಿಕರು, ಮಾಜಿ ಸಿಎಂ ಜಗದೀಶ ಶೆಟ್ಟರ್, ಡಿಸಿಎಂ ಲಕ್ಷ್ಮಣ ಸವದಿ, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಸಚಿವ ವಿ.ಸೋಮಣ್ಣ ಮೊದಲಾದವರು ಪಾಲ್ಗೊಂಡು, ಅಂತಿಮ ದರ್ಶನ ಪಡೆದರು.
ವೀರಶೈವ ಲಿಂಗಾಯತ ವಿಧಿ ವಿಧಾನದ ಮೂಲಕ ಸುರೇಶ ಅಂಗಡಿ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಗಾವಿ ಲೋಕಸಭೆ ಕ್ಷೇತ್ರದಿಂದ ಸತತವಾಗಿ ನಾಲ್ಕು ಬಾರಿ ಆಯ್ಕೆಯಾಗಿದ್ದ ಸುರೇಶ ಅಂಗಡಿ ಅವರು ಸರಳ, ಸಜ್ಜನ ರಾಜಕಾರಣಿ ಎಂದೇ ಹೆಸರುವಾಸಿಯಾಗಿದ್ದರು. ಸಂಸತ್ತಿನಲ್ಲಿ ಪಾಲ್ಗೊಳ್ಳಲು ಸೆ. ೧೦ ರಂದು ದೆಹಲಿಗೆ ತೆರಳಿದ್ದ ಅವರು ಕೋವಿಡ್ ಪರೀಕ್ಷೆಗೆ ಒಳಗಾಗಿದ್ದರು. ಈ ವೇಳೆ ಅವರಿಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿತ್ತು. ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು.

Leave A Reply

Your email address will not be published.