ಬೆಳಗಾವಿ: ಬಂಗಾಳ ಕೊಲ್ಲಿಯಲ್ಲಿ ಬೀಸಿದ ಚಂಡ ಮಾರುತದ ಪರಿಣಾಮ ಬೆಳಗಾವಿ ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಮಳೆ ಸುರಿಯುತ್ತಿದ್ದು. ಭಾರಿ ಮಳೆ ಸುರಿದಿದ್ದರಿಂದ ಶ್ರೀ ಕ್ಷೇತ್ರದ ಸೊಗಲ ಸೋಮೇಶ್ವರ ದೇವಸ್ಥಾನ ಜಲಾವೃತಗೊಂಡಿದೆ.
ಧಾರಾಕಾರ ಮಳೆ ಸುರಿದಿದ್ದರಿಂದ ಬುಧವಾರ ಸಂಜೆ ದೇವಸ್ಥಾನದ ಗರ್ಭಗುಡಿ ಜಲಾವೃತಗೊಂಡಿತ್ತು. ಇಂದು ಅಪಾರ ಪ್ರಮಾಣದ ನೀರು ನುಗ್ಗಿ, ಸೋಮೇಶ್ವರನ ಮೂರ್ತಿ ಕೂಡ ಮುಳುಗಿದೆ. ದೇವಸ್ಥಾನದ ಹೊರಭಾಗದಲ್ಲಿ ಮಳೆ ನೀರು ಝರಿಯಂತೆ ಉಕ್ಕಿ ಹರಿಯುತ್ತಿದೆ. ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಅಲ್ಲಲ್ಲಿ ಧಾರಾಕಾರ ಮಳೆ ಸುರಿದಿದೆ. ಪರಿಣಾಮ, ಜನಜೀವನ ಅಸ್ತವ್ಯಸ್ತಗೊಂಡಿದ್ದು, ಅಪಾರ ಪ್ರಮಾಣದ ಬೆಳೆ ಕೂಡ ನಾಶವಾಗಿದೆ. ಎರಡು ದಿನಗಳಿಂದ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಬುಧವಾರವೂ ಮುಂದುವರಿದಿದೆ. ಇದರ ಜೊತೆಗೆ ತಂಪಿನ ವಾತಾವರಣ ಸೃಷ್ಟಿಯಾಗಿದೆ. ಬೆಳಗಾವಿ ನಗರದಲ್ಲಿ ಧಾರಾಕಾರ ಮಳೆ ಸುರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಯಿತು. ನಗರದ ಬೀದಿಬದಿಗಳಲ್ಲಿ ತರಕಾರಿ ಮಾರಾಟ ಮಾಡುವ ವ್ಯಾಪಾರಸ್ಥರು ಮಳೆಯಿಂದ ತೀವ್ರ ತೊಂದರೆ ಎದುರಿಸಿದರು. ಕೆಲ ವ್ಯಾಪಾರಸ್ಥರ ತರಕಾರಿ ನೀರು ಪಾಲಾಗಿ, ತೀವ್ರ ತೊಂದರೆ ಎದುರಿಸಬೇಕಾಯಿತು.
Prev Post